ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿದ್ದ 17 ಸಚಿವರು ಚುನಾವಣೆಯಲ್ಲಿ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಮುಖ ಭಂಗ ಅನುಭವಿಸಿದವರಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ, ಅರಣ್ಯ ಸಚಿವ ರಮಾನಾಥ ರೈ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ, ಕಾನೂನು ಸಚಿವ ಟಿ.ಬಿ.ಜಯಚಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್.ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಉನ್ನತ ಶಿಕ್ಷಣ ಸಚಿವ ಬಸವರಾಜರಾಯರಡ್ಡಿ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ. ಸಣ್ಣ ಕೈಗಾರಿಕೆ ಸಚಿವೆ ಡಾ.ಗೀತಾ ಮಹದೇವಪ್ರಸಾದ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಮುಜರಾಯಿ ಸಚಿವ ರುದ್ರಪ್ಪ ಲಮಾಣಿ, ಪಶುಸಂಗೋಪನಾ ಸಚಿವ ಎ.ಮಂಜು ಸಾಲು ಸಾಲು ಮಕಾಡೆಮಲಗಿದ್ದಾರೆ.