ದಾವಣಗೆರೆ : ಸಿದ್ದರಾಯ್ಯರ ಬಳಿ ಬಿಜೆಪಿಯ ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಆಡಿಯೋ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿಕೆ ಬಿಡುಗಡೆ ಮಾಡಿರುವ ಆಡಿಯೋದಂತೆಯೇ ಮತ್ತೊಂದು ಆಡಿಯೋ ಸಿದ್ದರಾಮಯ್ಯ ಅವರ ಬಳಿ ಇದ್ದು, ಅದನ್ನು ಸಂದರ್ಭ ನೋಡಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ, ಐದು ವರ್ಷ ಸಂಪೂರ್ಣ ಆಡಳಿತ ನಡೆಸಲಿದೆ ಎಂದರು.!