ನವದೆಹಲಿ: ಕೊರೋನಾ ಸೋಂಕು ಹರಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಿಬಿಎಸ್‌ಐ ಪಠ್ಯಕ್ರಮ ಅನುಸರಿಸುವ 1 ರಿಂದ 8ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ನಿಶಾಂಕ್ ಅವರು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಆದೇಶಿಸಿರುವುದಾಗಿ ಹೇಳಿದ್ದಾರೆ.