ಬೆಂಗಳೂರು: ದೇಶದಲ್ಲಿ ನಡೆದ ಸಿಬಿಎಸ್ಇ 10 ಮತ್ತು 12 ರ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಗೆ ಆಗಿದ್ದರಿಂದ ಮರು ಪರೀಕ್ಷೆ ನಡೆಸಲಾಗುತ್ತದೆ.

ದೇಶದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 26 ರಂದು ನಡೆದ 12 ನೇ ತರಗತಿಯ ಅರ್ಥಶಾಸ್ತ್ರ ಹಾಗೂ ಕಳೆದ ಭಾನುವಾರ ನಡೆದ 10 ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆಗಳು ಸೋರಿಗೆ ಆದ ಹಿನ್ನೆಲೆಯಲ್ಲಿ ಎರಡು ತರಗತಿ ಮರು ಪರೀಕ್ಷೆ ನಡೆಸಲಾಗುತ್ತದೆ. ಮರು ಪರೀಕ್ಷೆಯ ದಿನಾಂಕವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಸಿಬಿಎಸ್ಇ ಹೇಳಿದೆ.