ನವದೆಹಲಿ : ಕೇಂದ್ರ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಸಿಬಿಎಸ್ ಇ 10,12 ತರಗತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳು ಹೆಚ್ಚು ದೂರವಿರದಂತೆ ನೋಡಿಕೊಳ್ಳುವ ಸಲುವಾಗಿ ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್, ದೇಶಾದ್ಯಂತ ಜು. 1 ರಿಂದ 15 ರವರೆಗೆ ನಿಗದಿಯಾಗಿರುವ 10 ಮತ್ತು 12 ನೇ ತರಗತಿ ಪರೀಕ್ಷೆಗಳು ಕೇವಲ 3 ಸಾವಿರ ಪರೀಕ್ಷಾ ಕೇಂದ್ರಗಳ ಬದಲಾಗಿ 15 ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್ ಹರಡದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಪಾಲಿಸಬೇಕಾದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಾಗೂ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳು ಹೆಚ್ಚು ದೂರವಿರುವಂತೆ ನೋಡಿ ಕೊಳ್ಳುವ ಸಲುವಾಗಿ ಹೆಚ್ಚು ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.