ನವದೆಹಲಿ :  ಲಾಕ್ ಡೌನ್ ನಿಂದಾಗಿ ಪೋಷಕರ ಜೊತೆ ತವರು ರಾಜ್ಯ ಅಥವಾ ಜಿಲ್ಲೆಗಳಿಗೆ ಮರಳಿದ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳು ಅಲ್ಲಿಂದಲೇ ಪರೀಕ್ಷೆ ಬರೆಯಬಹುದು ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ರಮೇಶ್ ಪೋಖ್ರಿಯಾಲ್, ಲಾಖ್ ಡೌನ್ ನಿಂದಾಗಿ ಬೇರೆ ರಾಜ್ಯ, ಜಿಲ್ಲೆಗಳಿಗೆ ಹೋಗಿರುವ ವಿದ್ಯಾರ್ಥಿಗಳು ತಾವಿರುವ ಸ್ಥಳದಿಂದಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಾವು ತೆರಳಲಿರುವ ಸ್ಥಳದಿಂದಲೇ ಹೇಗೆ ಪರೀಕ್ಷೆ ಬರೆಯಬಹುದು ಎಂಬ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 1 ರಿಂದ 15 ರವರೆಗೆ ಈ ಪರೀಕ್ಷೆಗಳು ನಿಗದಿಯಾಗಿವೆ.