ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಅಕ್ರಮ ಮತದಾರನ ಗುರುತಿನ ಚೀಟಿ ಪತ್ತೆ ಹಿನ್ನೆಲೆಲ್ಲಿ  ಬಿಜೆಪಿ – ಕಾಂಗ್ರೆಸ್ ಕೆಸರಾಟಕ್ಕೆ ಮುಂದಾಗಿದೆ.

ಬಿಜೆಪಿ ಕಾರ್ಯಕರ್ತ ಈ ಅಕ್ರಮ ಮತದಾರರನ ಗುರುತಿನ ಚೀಟು ರೆಡಿಮಾಡಿದ್ದಾರೆಂದು ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾನ ಮುಂದೂಡಿಕೆಯಾಗುವ ಸಾಧ್ಯತೆ ಗೋಚರವಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ 9 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಅಕ್ರಮವಾಗಿ ಪತ್ತೆಯಾಗಿದ್ದು, ಮತದಾನ ಮುಂದೂಡುವಂತೆ ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದಿವೆ. ಪ್ರಕರಣದ ಗಂಭೀರ ತನಿಖೆ ನಡೆಸುತ್ತಿರುವ ಚುನಾವಣಾ ಆಯೋಗ ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಜಾಲಹಳ್ಳಿಯ ಅಪಾರ್ಟ್ ಮೆಮಟ್ ವೊಂದರಲ್ಲಿ ಐದು ಲ್ಯಾಪ್ ಟಾಪ್, ಒಂದು ಪ್ರಿಂಟರ್, ಎರಡು ಟ್ರಂಕ್ ತುಂಬಾ ಮತದಾರರ ಗುರುತಿನ ಚೀಟಿ ಸಿಕ್ಕಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಂಗಳವಾರ ತಡರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.