ಚಿತ್ರದುರ್ಗ: 2020ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಸಂಬಂಧ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ನಡೆಸಲಾಗುತ್ತದೆ.

 ನವೆಂಬರ್ 19 ರಂದು ಬೆಳಿಗ್ಗೆ 6ಕ್ಕೆ ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ರಾಧಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.