ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಎರಡು ಕಡೆ ಗುರುತಿನ ಚಿಟಿ ಪಡೆದು ಕಾನೂನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಇಬ್ರಾಹಿಂ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲು ಬಿಜೆಪಿ ಮುಂದಾಗಿದೆಯಂದು ತಿಳಿದುಬಂದಿದೆ.

ಭದ್ರಾವತಿ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ಜಿಲ್ಲೆಯ ಶಿವಾಜಿನಗರ ಕ್ಷೇತ್ರದಲ್ಲಿ ಇಬ್ರಾಹಿಂ ವೋಟರ್ ಐಡಿ ಹೊಂದಿದ್ದಾರೆ ಹಾಗಾಗಿ ಚುನಾವಣಾ ಆಯೋಗಕ್ಕೆ ದೂರ ನೀಡಲು ಬಿಜೆಪಿ ಮುಂದಾಗಿದೆ.