ಬೆಂಗಳೂರು: ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ಸಂಬಂಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ತೀರ್ಪಿನಿಂದ ಭಾಗಶಃ ಸಂತೋಷವಾಗಿದೆ. ಅನರ್ಹತೆ ಎನ್ನುವುದೇ ಒಂದು ಕಳಂಕ. ನಾನು ನಿಯಮದ ಪ್ರಕಾರವೇ ವಿಧಾನಸಭೆ ಮುಗಿಯುವವರೆಗೆ ಅನರ್ಹತೆ ಮಾಡಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಬೇಕೇ ಬೇಡವೇ ಎಂಬ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.