ಚಿತ್ರದುರ್ಗ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೇಶ್ ಪರವಾಗಿ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಮಂಡ್ಯ ಲೋಕಸಭೆ ಚುನಾವಣೆಗೆ ಸುಮಲತಾ ಪರ ಪ್ರಚಾರ ಮಾಡಲು ಹೋಗುತ್ತಿದ್ದೇನೆ . ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಟಿಕೆಟ್ ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ನೀಡಬೇಕು ಎಂದು ನಾವು ಹೇಳಿದ್ವಿ, ಅಲ್ಲದೇ ಅಂತಿಮವಾಗಿ ಅವರ ಹೆಸರನ್ನು ಕಳುಹಿಸಲಾಗಿತ್ತು. ಆದರೆ ಕೇಂದ್ರದಲ್ಲಿ ಏನಾಯ್ತೋ ಗೊತ್ತಿಲ್ಲ. ಹೈಕಮಾಂಡ್ ತೇಜಸ್ವಿ ಸೂರ್ಯ ಹೆಸರನ್ನೇ ಅಂತಿಮಗೊಳಿಸಿದೆ ಎಂದರು ಹೇಳಿದರು.