ಬೆಂಗಳೂರು: ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೆಪ್ಟೆಂಬರ್ 21ರಿಂದ ಹತ್ತು ದಿನಗಳ ಕಾಲ ಬೆಂಗಳೂರುನಲ್ಲಿ ನಡೆಯಲಿದೆ. ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ ಗುರುತಿಸುವ ಕಾರ್ಯ ನಡೆಸಲಾಗಿತ್ತು. ಅಂತಿಮವಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಹೇಳಿದರು.