ಚಾಮರಾಜನಗರ: ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಗೊಳಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ ಶಿಕ್ಷಣ ಸಚಿವ ಸುರೇಶ್ ಕುಮಾರ್.

ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಅವರು ಈ ಕುರಿತು ಮಾತನಾಡಿ, “ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಹಿರಿಯರೊಂದಿಗೆ ಚರ್ಚಿಸಲಾಗಿದೆ. ಪರೀಕ್ಷೆ ನಡೆಸಬೇಕು ಎನ್ನುವುದು ಸರ್ಕಾರದ ಅಭಿಪ್ರಾಯ. ಕೊರೊನಾದಿಂದಾಗಿ ಶಿಕ್ಷಣ ಇಲಾಖೆಗೂ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ತರಗತಿಗಳು ಹೇಗಿರಬೇಕು ಎಂದು ಚರ್ಚೆ ನಡೆಸುತ್ತಿದ್ದೇವೆ. ನಾಳೆ ಶಿಕ್ಷಕರ ಮತ್ತು ಪದವೀದರ ಕ್ಷೇತ್ರದ ಪರಿಷತ್ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದೇನೆ. ಬಹುತೇಕ ಸೋಮಾವರ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ಹೇಳಿದ್ದಾರೆ.