ಬೆಂಗಳೂರು:ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸ್ಥಳಗಳಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸದಂತೆ ರಾಜ್ಯ ಚುನಾವಣಾ ಆಯೋಗವು ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ.

ಸೂಕ್ತ ಬಂದೋಬಸ್ತ್ ಒದಗಿಸುವಂತೆಯೂ ನಿರ್ದೇಶನ ನೀಡಿದೆ. ಬುಧವಾರ ಪತ್ರ ಬರೆದಿರುವ ಆಯೋಗವು, ಆ. 29 ರಂದು ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದ ಚುನಾವಣೆ ನಡೆ ಯಲಿದೆ. ಚುನಾವಣಾ ಕಾರ್ಯಗಳಿಗೆ ಅಧಿಕಾರಿ ಗಳನ್ನು ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಚುನಾವಣಾ ನಡೆವ ಸ್ಥಳಗಳಲ್ಲಿ ಯಾವುದೇ ಅಧಿಕಾರಿಗಳನ್ನು ವರ್ಗ ಮಾಡಬಾರದೆಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.