ತುಮಕೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಪರಮೇಶ್ವರ್ ಅವರು ಈಗಾಲೇ  ವಿಷಯಕ್ಕೆ ಸಂಬಂಧಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸ್ಪಷ್ಟಪಡಿಸಿದ್ದಾರೆ ಹಾಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿ ಆಗಿ ಸ್ಪರ್ಧಿಸಲಿದೆ ಎಂದರು.

ಸಮ್ಮಿಶ್ರ ಸರಕಾರವನ್ನು ಮುನ್ನಡೆಸುವುದು ಅಷ್ಟು ಸುಲಭದ ಕೆಲಸವಲ್ಲಾ.  ಎಂದು ತಮ್ಮ ಸಂಕಷ್ಟವನ್ನು ತೋಡಿಕೊಂಡರು. ನಮ್ಮ ಸರಕಾರ ಆಡಳಿತಾವಧಿಯಲ್ಲಿ ಜಾರಿಗೆ ಬಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ ಸಹಿತ ಹಲವು ಬಡಜನರಿಗೆ ನೆರವಾಗುವ ಯೋಜನೆಯನ್ನು ಮುಂದುವರಿಸಲು ಜೆಡಿಎಸ್‌ನೊಂದಿಗೆ ಆಂತರಿಕವಾಗಿ ಒಪ್ಪಂದ ಮಾಡಿಕೊಂಡಿದ್ದೇವೆ ಎಂದರು.