ಬೆಂಗಳೂರು: ಸಂತ್ರಸ್ತರ ರಕ್ಷಣೆಗೆ ಕಂಕಣ ಬದ್ಧರಾಗುವ ಮೂಲಕ ಸ್ವಾತಂತ್ರ್ಯ ಆಚರಿಸೋಣ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರಕೃತಿಯ ವೈಪರೀತ್ಯದಿಂದಾಗಿ ನಮ್ಮ ರಾಜ್ಯದ ಹಲವು ಜಿಲ್ಲೆಗಳ ಜನತೆ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬರಗಾಲವೂ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಜನತೆಯ ರಕ್ಷಣೆಗೆ ಕಂಕಣ ಬದ್ಧರಾಗುವ ಮೂಲಕ ಸ್ವಾತಂತ್ರ್ಯ ಆಚರಿಸೋಣ ಎಂದಿದ್ದಾರೆ.