ಬೆಂಗಳೂರು: ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಘರ್ ಎಂದು ನಾಮಕರಣ ಮಾಡುವ ಸಂಬಂಧ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯರೊಂದಿಗೆ ಚರ್ಚಿಸಿ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಜ್ ಭವನ ಒಂದು ಸ್ವಾಯತ್ತ ಸಂಸ್ಥೆ ಇದಕ್ಕೆ ಟಿಪ್ಪುಸುಲ್ತಾನ್ ಘರ್ ಎಂಬ ಹೆಸರಿಡಲು ಮುಸ್ಲಿಂ ಸಮುದಾಯದ ಮುಖಂಡರು ಸಲಹೆ ಮಾಡಿದ್ದಾರೆ. ಈ ಬಗ್ಗೆ ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದರು.

ಬಿಜೆಪಿ ವಿರೋಧ.!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಜ್ ಭವನದ ಅಭಿವೃದ್ಧಿಗೆ 50 ಕೋಟಿ ರೂ ಅನುದಾನವನ್ನು ನೀಡಲಾಗಿತ್ತು. ಅದನ್ನು ಹೈಜಾಕ್ ಮಾಡಿ ಈಗ ಟಿಪ್ಪು ಸುಲ್ತಾನ್ ಹೆಸರಿಡುತ್ತಿರುವುದು ತಪ್ಪು. ಹಜ್ ಭವನ ಎಲ್ಲ ಮುಸ್ಲಿಂ ಬಾಂಧವರಿಗೆ ನೀಡಲಾಗಿದೆ. ಯಾರೋ ಟಿಪ್ಪು ಸುಲ್ತಾನನ್ನು ಪ್ರೀತಿ ಮಾಡುವವರರಿಗೆ ಕೊಟ್ಟಿರೋದಲ್ಲ ಎಂದಿದ್ದಾರೆ.

ಹಾಗಾಗಿ ಟಿಪ್ಪು ಘರ್ ನಾಮಕರಣ ಮುಂದೆ ಯಾವ ತಿರುವು ಪಡೆದುಕೊಳ್ಳುತ್ತದೋ ಎಂಬುದು ಕುತುಹಲದ ಪ್ರಶ್ನೆ.