ಬೆಂಗಳೂರು: ದುಡ್ಡಿನ ವಿಚಾರದಲ್ಲಿ  ಗಂಡ  ಹೆಂಡತಿ ಮಧ್ಯೆ ಜಗಳಕ್ಕೆ ಕಾರಣವಾಗಿ ಹೆಂಡಿತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ರಾತ್ರಿ ನಡೆದಿದೆ.!

ಸಹನಾ  (42) ಎಂಬುವರನ್ನು ಆಕೆಯ ಪತಿ ಗಣೇಶ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಂಪತಿ ಮಧ್ಯೆ ಹಣಕಾಸಿನ ವಿಚಾರವಾಗಿ ಭಿನ್ನಾಭಿಪ್ರಾಯ ಇತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ನಿನ್ನೆ ರಾತ್ರಿ ಇಬ್ಬರ ಮಧ್ಯೆ ಜಗಳ ನಡೆದು ವಿಕೋಪಕ್ಕೆ ಹೋದಾಗ ಗಂಡ ಗಣೇಶ್ ಚಾಕುವಿನಿಂದ ಸಹನಾಗೆ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಗಣೇಶ್‌ನಿಗಾಗಿ ಪೊಲೀಸರು ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.