ನವದೆಹಲಿ: ಇನ್ನು ಮೂರು ತಿಂಗಳ ಕಾಲ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶದ ಪೂರ್ವಭಾಗ, ಗೋವಾ, ಮಹಾರಾಷ್ಟ್ರ ಆಂಧ್ರಪ್ರದೇಶ, ಕೇರಳ, ಉತ್ತರಪ್ರದೇಶ, ಹರಿಯಾಣ ಭಾಗದಲ್ಲಿ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಸಾಮಾನ್ಯ ಉಷ್ಣಾಂಶಕ್ಕಿಂತ ಒಂದು ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇನ್ನು ಹಿಮಾಚಲಪ್ರದೇಶ, ಉತ್ತರಾಖಂಡ್, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಏಪ್ರಿಲ್ ನಿಂದ ಜೂನ್ ವರೆಗೆ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ಇರಲಿದೆ. ಮೂರು ತಿಂಗಳ ಕಾಲ ಬಿಸಿಲ ಬೇಗೆ ಜಾಸ್ತಿಯಾದರೆ ಕೋರೋನಾ ಸೋಂಕು ನಿಯಂತ್ರಣಕ್ಕೆ ಬರಬಹುದು ಎಂದು ಹೇಳಲಾಗಿದೆ.

ಇನ್ನು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಏಪ್ರಿಲ್ 8 ರವರೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಕೊಡಗು ಮೈಸೂರು ಮೊದಲಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆಯಂತೆ