ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಕೂಡ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಮಲೆನಾಡು ಸೇರಿದಂತೆ ಹಲವು ಕಡೆ ಮಳೆಯಾಗಲಿದ್ದು, ಅತಿ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಳೆ ಮಾರುತಗಳು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ಕೇಂದ್ರ ಭಾಗಗಳಲ್ಲಿ ಹಾನಿಯುಂಟು ಮಾಡಲಿದೆಯಂತೆ.!