ಬೆಂಗಳೂರು : ಫೆಬ್ರವರಿಯಿಂದ ಜುಲೈ 4 ರವರೆಗೆ ರೈತರಿಗೆ ನೀಡಬೇಕಾಗಿದ್ದ 530 ಕೋಟಿ ರೂ. ಪ್ರೋತ್ಸಾಹಧನ ಸರ್ಕಾರದಿಂದ ಬಿಡುಗಡೆಯಾಗಿದ್ದು, ಶೀಘ್ರವೇ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ರೈತರಿಗೆ ನೀಡಬೇಕಾಗಿದ್ದ 530 ಕೋಟಿ ರೂ. ಪ್ರೋತ್ಸಾಹಧನ ಬಿಡುಗಡೆಯಾಗಿದ್ದು, ಶೀಘ್ರವೇ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದರು.