ಬೆಂಗಳೂರು:ಕೊರೋನಾ ನಿಯಂತ್ರಿಸುವಲ್ಲಿ ಸಚಿವರ ಮಧ್ಯೆ ಹೊಂದಾಣಿಕೆ ಇಲ್ಲ. ಗಳಿಗೆಗೊಂದು ಹೇಳಿಕೆ, ನಿಮಿಷಕ್ಕೊಂದು ತೀರ್ಮಾನ ಮಾಡಿ, ಜನಸಾಮಾನ್ಯರನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ.

ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ದಿಂಬು, ಹಾಸಿಗೆ ಖರೀದಿ ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.