ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ  ಯಾವುದೇ ಭಾಗ್ಯಗಳನ್ನು ನಿಲ್ಲಿಸುವುದಿಲ್ಲ ಎಂದು ದೋಸ್ತಿ ಸರಕಾರದ ಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರದಲ್ಲಿ ಮಾತನಾಡಿದ ಅವರು ಈ ಹಿಂದಿನ ಸರ್ಕಾರದಲ್ಲಿ ಚಾಲ್ತಿಯಲ್ಲಿದ್ದ ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸಿಲ್ಲ, ಎಲ್ಲಾ ಕಾರ್ಯಕ್ರಮಗಳಿಗೆ ಹಣವನ್ನು ಮೀಸಲಿಡಲಾಗಿದೆ. ಹೀಗಾಗಿ ‘ಶಾದಿಭಾಗ್ಯ’ ಸೇರಿದಂತೆ ಯಾವುದೇ ಯೋಜನೆಗಳನ್ನು ನಿಲ್ಲಿಸುವ ಮಾತಿಲ್ಲ ಅಂತ ಹೇಳಿದ್ದಾರೆ.