ಸಿಂಧ್ ಪ್ರಾಂತ್ಯ : ಪಾಕಿಸ್ತಾನದ ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿರುವ ಘಟನೆ ನಡೆದಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇರುವ ಹಿಂದೂ ದೇವಾಲಯದ ಮೂರ್ತಿಗಳನ್ನು ಮೊಹಮ್ಮದ್ ಇಸ್ಮಾಯಿಲ್ ಎಂಬ ವ್ಯಕ್ತಿ ಧ್ವಂಸ ಮಾಡಿದ್ದಾರೆ ಎಂದು ಅಶೋಕ್ ಕುಮಾರ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಬದಿನ್ ಹಿರಿಯ ಎಸ್ಪಿ ಶಬೀರ್ ಸೆತರ್ ಘಟನೆಯ ವರದಿ ಕೇಳಿದ್ದಾರೆ.