ಬೆಂಗಳೂರು: ಹಿರಿಯೂರು ಶಾಸಕಿ ಪೂರ್ಣಿಮಾ ಗಂಡ ಶ್ರೀನಿವಾಸ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿ ಆಗಿ  ಡಿ.ಟಿ ಶ್ರೀನಿವಾಸ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಹಾಗಾಗಿ ಬಿಜೆಪಿ ಪಕ್ಷದಿಂದ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಆಗ್ನೇಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಆದೇಶ ಹೊರಡಿಸಿದ್ದಾರೆ.

ಶ್ರೀನಿವಾಸ್ ಅವರು ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿದ್ದರು. ಶ್ರೀನಿವಾಸ್ ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿಯಾಗಿದ್ದಾರೆ ಎಂಬುದು ವಿಶೇಷ. ಆದರೆ ಗಂಡನ ಪರವಾಗಿ ಚುನಾವಣೆಯಲ್ಲಿ ಪಕ್ಷದ ಪರ ನಿಲ್ಲೂತ್ತಾರೋ, ಅಥವ ಗಂಡನಪರ ವಹಿಸುತ್ತಾರೋ ಎಂಬುದು ಕಾದು ನೋಡ ಬೇಕಿದೆ.