ಧಾರವಾಡ: ಹುಬ್ಬಳ್ಳಿ – ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದೆ.
ಈ ಬಗ್ಗೆ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ಇಂದು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹ ಕೊರೊನಾ ಪಾಸಿಟಿವ್​ ಎಂಬ ವರದಿ ಬಂದಿರುವುದರಿಂದಾಗಿ ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ ಅಂತ ತಿಳಿಸಿದ್ದಾರೆ.