ಬೆಂಗಳೂರು : ನಗರದ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಹ್ಯಾಂಗ್ ಓವರ್ ಪಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಹ್ಯಾಂಗ್ ಓವರ್ ಪಬ್ ನಲ್ಲಿ ಮಧ್ಯಾಹ್ನ ಸುಮಾರು 12.25ರ ಸಮಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ 3 ಆಗ್ನಿ ಶಾಮಕ ವಾಹನದ ಸಿಬ್ಬಂದಿಗಳು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದರಿಂದಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ. ಅಲ್ಲದೇ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .