ಕಲಬುರಗಿ : ಮಾಜಿ ಸಚಿವ ವೈಜನಾಥ್ ಪಾಟೀಲ್ (82) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ್ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವೈಜನಾಥ್ ಅವರು ಚಿಂಚೋಳಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಅಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಹಾಗೂ ಹೆಚ್.ಡಿ.ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. ಎಂಎಲ್ ಸಿ ಆಗಿಯೂ ವೈಜನಾಥ್ ಪಾಟೀಲ್ ಸೇವೆ ಸಲ್ಲಿಸಿದ್ದರು.

ನಾಳೆ ಕಲಬುರಗಿಯ ಚಿಂಚೋಳಿ ತೋಟದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಟುಂಬಸ್ಥರು ಮಾಹಿತಿ ನೀಡಿದ್ದಾರೆ.