ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಹಿನ್ನೆಲೆ ಜೂ.8ರಿಂದ ದೇಗುಲಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದರೂ, ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಭಕ್ತರಿಗೆ ಸದ್ಯ ದೇವರ ದರ್ಶನದ ಭಾಗ್ಯವಿಲ್ಲ.

ಕೊರೋನಾ ಸೋಂಕು ತಡೆಗಟ್ಟಲು ದೇಗುಲದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಹೆಚ್ಚಿನ ಕಾಲಾವಕಾಶ ಬೇಕಿರುವುದರಿಂದ ದೇವರ ದರ್ಶನ, ಪೂಜೆ ಮತ್ತು ವಾಸ್ತವ್ಯದ ಅವಕಾಶಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ

ಅದರಂತೆ ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆ ಇರುವುದರಿಂದ ಬೆಳಗಾವಿ ಜಿಲ್ಲೆಯ ಸವದತ್ತಿಯ ರೇಣುಕಾ ಯಲ್ಲಮ್ಮ, ಜೋಗಳಭಾವಿ ಸತ್ತೆಮ್ಮ ಹಾಗೂ ಚಿಂಚಲಿ ಮಾಯಕ್ಕಾ ದೇವಾಲಯಗಳಿಗೆ ಸಾರ್ವಜನಿಕರ ಪ್ರವೇಶವನ್ನು 30ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.