ಹೊರರಾಜ್ಯಗಳಿಂದ ಬಂದವರಿಂದ ಸೋಂಕು: ಶ್ರೀರಾಮುಲು.!

ಬೆಂಗಳೂರು : ಕೊರೋನಾ ಸೋಂಕು ರಾಜ್ಯದಲ್ಲಿ
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಕ್ಕೆ ಕಾರಣ ಹೊರರಾಜ್ಯಗಳಿಂದ ಹೆಚ್ಚು ಜನರು ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳಕ್ಕೆ ಕಾರಣವಾಯಿತು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಾಲಕಾಲಕ್ಕೆ ತ್ವರಿತವಾಗಿ ಅನೇಕ ಉಪಕ್ರಮಗಳನ್ನು ಕೈಗೊಳ್ಳುತ್ತಲೇ ಬಂದಿದೆ. ಲಾಕ್ ಡೌನ್ ತೆರವು ಮಾಡಿದ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹೆಚ್ಚಿತು ಎಂದರು.