ಬೆಂಗಳೂರು; ಬೇರೆ ದೇಶ ಹಾಗೂ ರಾಜ್ಯಗಳಿಂದ ಬರುತ್ತಿರುವ ಕನ್ನಡಿಗರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕೆನ್ನುವ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳು ಮತ್ತು ಸಚಿವರ ಸಭೆ ನಡೆಸಿ ಚರ್ಚಿಸಿದ್ದಾರೆ.

ಹೊರ ರಾಜ್ಯದಿಂದ ರೈಲುಗಳಲ್ಲಿ ಬರುವವರ ವೆಚ್ಚ ಸರ್ಕಾರವೇ ಭರಿಸುವುದು ಮತ್ತು ರಾಜ್ಯಕ್ಕೆ ಬಂದ ಎಲ್ಲರನ್ನು 14 ದಿನ‌ ಕ್ವಾರಂಟೈನ್ ಮಾಡಬೇಕೆಂದು ಸಭೆಯಲ್ಲಿ ನಿರ್ಣಯಿಸಲಾಗಿದೆ.

ಸಭೆಯಲ್ಲಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್, ಸಚಿವರಾದ ಅಶೋಕ್, ಸುರೇಶ್ ಕುಮಾರ್, ಡಾ.ಕೆ.ಸುಧಾಕರ್ ಭಾಗಿಯಾಗಿದ್ದಾರೆ.