ಬೆಂಗಳೂರು: ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್‌ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಗೃಹ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್​ಡಿಆರ್​ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಇಲ್ಲೂ ಹೋಂಗಾರ್ಡ್‌ಗಳನ್ನು ತರಬೇತಿ ನೀಡಿ ನಿಯೋಜಿಸಬಹುದು ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಇದರಿಂದ ಹೋಂ ಗಾರ್ಡ್ ಗಳಿಗೆ ಜೀವ ಬಂದಂತಾಗಿದೆ.