ಬೆಂಗಳೂರು: ರಾಜ್ಯ ಸರ್ಕಾರವು ಜೂ.1ರಿಂದ ಹೋಟೆಲ್ ಉದ್ಯಮಕ್ಕೆ ಮುಕ್ತ ಅವಕಾಶ ನೀಡುವ ಮನಸ್ಸನ್ನು ಹೊಂದಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಮುನ್ನಡೆಸಲು ಅವಕಾಶ ನೀಡಲ್ಲ. ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ಆದರೆ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು
ಮತ್ತಷ್ಟು ದಿನ ಕಾಯಬೇಕಾಗುತ್ತದೆ . ಕೊರೋನಾ ಸೋಂಕು ಹರಡುವ ಭೀತಿಯಿಂದ ಕೇಂದ್ರ ಸರ್ಕಾರವು ದೇಶಾದ್ಯಂತ 4ನೇ ಹಂತದ ಲಾಕ್ ಡೌನ್ ಜಾರಿ ಮಾಡಿದ್ದು, ಹಾಗಾಗಿ ಹೋಟೆಲ್, ಮಾಲ್, ಬಾರ್ & ರೆಸ್ಟೋರೆಂಟ್ ಗಳ ವ್ಯವಹಾರಗಳಿಗೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.