ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ೫೦೦ ಮತ್ತು ೧,೦೦೦ ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಭಾನುವಾರಕ್ಕೆ ೪ ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಆಡಳಿತಾರೂಢ ಬಿಜೆಪಿ ನಾಯಕರು ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಕಿಡಿ ಕಾರಿರುವ ರಾಹುಲ್ ಗಾಂಧೀ, ’ನೋಟು ರದ್ದತಿಯಿಂದ ಪ್ರಧಾನಿಯವರ ಆಪ್ತ ಬಂಡವಾಳಶಾಹಿ ಸ್ನೇಹಿತರಿಗಷ್ಟೇ ಲಾಭವಾಗಿದ್ದು, ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದಿದೆ’ ಎಂದು ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪಕ್ಷದ ಆನ್‌ಲೈನ್ ಅಭಿಯಾನದ ಭಾಗವಾಗಿ #SಠಿeಚಿಞUಠಿಂgಚಿiಟಿsಣಆeಒoಆisಚಿsಣeಡಿ ಶೀರ್ಷಿಕೆಯಡಿ ವಿಡಿಯೊ ಬಿಡುಗಡೆ ಮಾಡಿರುವ ಅವರು, ’ಒಂದು ಕಾಲದಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿದ್ದ ಭಾರತದ ವೃದ್ಧಿ ದರವನ್ನು ಬಾಂಗ್ಲಾದೇಶ ಮೀರಿಸಲು ಕಾರಣವೇನು’ ಎಂದು ಪ್ರಶ್ನಿಸಿದ್ದಾರೆ. ಕೊರೋನಾ ಸೋಂಕಿನಿಂದ ದೇಶದಲ್ಲಿ ಆರ್ಥಿಕ ಕುಸಿತ ಆಗಿಲ್ಲ. ಬದಲಾಗಿ, ನೋಟು ರದ್ದತಿ ಮತ್ತು ಜಿಎಸ್‌ಟಿ ಇದಕ್ಕೆ ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ.