ಹಾಸನ : ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ದೂರು ನೀಡುವುದಾಗಿ ಹೇಳಿದ್ದಾರೆ. 

ಆಪರೇಷನ್ ಕಮಲದ ಆಡಿಯೊದಲ್ಲಿ ಎಚ್.ಡಿ. ದೇವೇಗೌಡರ ವಿರುದ್ಧ ಪ್ರೀತಂ ಆಕ್ಷೇಪಾರ್ಹ ಮಾತನಾಡಿದ್ದಾರೆ ಎನ್ನಲಾಗಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಕಲ್ಲು ತೂರಾಟದಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಗಾಯಗೊಂಡಿದ್ದಾರೆ.