ಹಾಸನ:  ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

 ಪ್ರೀತಂ ಗೌಡ ಅವರ ಹಾಸನ ನಿವಾಸದ ಮೇಲೆ ಜೆಡಿಎಸ್ ಕಾರ್ಯಕರ್ತರು ಆಪರೇಷನ್ ಕಮಲ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪ್ರೀತಂ ಗೌಡ, ನನ್ನನ್ನು ಹತ್ಯೆ ಮಾಡುವ ಮಾತುಗಳು ಜೆಡಿಎಸ್ ಕಾರ್ಯಕರ್ತರಿಂದ ಕೇಳಿಬಂದಿದ್ದು, ಇದರ ಹಿಂದೆ ಸಿಎಂ ಕುಮಾರಸ್ವಾಮಿ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.!