ಚಿತ್ರದುರ್ಗ: ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಆಡಳಿತ, ನ್ಯಾಯಾಂಗ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಯುವಜನ ಸೇವಾ ಇಲಾಖೆ ಹಾಗೂ ಡೇಟ್ ಚಾರಿಟೇಬಲ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಿಂದ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಎ.ಮೋಹನ್ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಜಿಲ್ಲಾ ಸರ್ಜನ್ ಡಾ; ಜಗದೀಶ್, ಜಿಲ್ಲಾ ವಾರ್ತಾಧಿಕಾರಿ ಧನಂಜಯ, ಡೇಟ್ ಚಾರಿಟೇಬಲ್ ಸೊಸೈಟಿ ಅಧ್ಯಕ್ಷರಾದ ಡಾ; ಹೆಚ್.ಎಸ್.ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು