ನವದೆಹಲಿ: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆ 10ನೇ ತರಗತಿಯ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎನ್ನುವ ಚರ್ಚೆಯ ಮಧ್ಯೆ ಇಂದು ಪರೀಕ್ಷೆ ಆರಂಭವಾಗಿದೆ. ಇದರ ಬೆನ್ನಲ್ಲೇ ಸಿಬಿಎಸ್ಇ ಬೋರ್ಡ್ ನ 10 ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ಜುಲೈ 1ರಿಂದ 15ರವರೆಗೆ ನಡೆಯಲಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್ ನಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಉತ್ತೀರ್ಣಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.