ಬೆಂಗಳೂರು: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 10,611 ಪದವಿಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ನೀಡಲಾಗಿದ್ದ ಅವಧಿಯನ್ನು 8 ದಿನಗಳ ಕಾಲ ವಿಸ್ತರಿಸಲಾಗಿದೆ. ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಂತೆ ಏಪ್ರಿಲ್ 10 ಅರ್ಜಿ ಸಲ್ಲಿಸಲು ಕೊನೆ ದಿನವಾಗಿತ್ತು. ಅದನ್ನು ಏಪ್ರಿಲ್ 18 ರವರೆಗೆ ವಿಸ್ತರಿಸಲಾಗಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ(6 ರಿಂದ 8 ನೇ ತರಗತಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕೊನೆಯ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಂಡು ಬಂದು ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ ಶಿಕ್ಷಣ ಇಲಾಖೆ ಹೊಣೆಯಲ್ಲ ಎಂದು ತಿಳಿಸಲಾಗಿದೆ.

ಮಾಹಿತಿ, ಅರ್ಜಿ ಸಲ್ಲಿಕೆಗೆ ಸಹಾಯವಾಣಿ ಸಂಖ್ಯೆ 080 22483145, 22228805 ಹಾಗೂ ವೆಬ್ ಸೈಟ್ www.schooleducation.kar.nic.in . ಸಂಪರ್ಕಿಸುವುದು.