ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಸಿಎಂ ಬಿಎಸ್ ವೈ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ಹೇಳಿದರು. ಈಗಾಗಲೇ ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದ್ದು, ಮತ್ತೆ 16 ಸಾವಿರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.