ಹುಬ್ಬಳ್ಳಿ: ರಾಜ್ಯ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ಟಿಕೆಟ್ ಪಡೆದ ರಾಜೀವ್ ಚಂದ್ರ ಶೇಖರ್ ಬಗ್ಗೆ ಬಿಜೆಪಿಯಲ್ಲಿ ಅಸಮದಾನ ಬುಗಿಲೆದಿದ್ದೆ ಎಂದು ಮಾಧ್ಯಮಗಳಲ್ಲಿ ಸುದ್ದಿಆಗಿತ್ತು. ವಿಜಯ ಸಂಕೇಶ್ವ ರ್ ಅವರು ಬಿಜೆಪಿಗೆ ಗುಡ್ ಬೈ ಹೇಳುತ್ತಾರೆ ಎಂಬ ವಿಷಯಕ್ಕೆ ಸಂಕೇಶ್ವರ್ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ  ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕತ ನಾನು ಅಂತ ಡಾ. ವಿಜಯ ಸಂಕೇಶ್ವರ ಹೇಳಿದ್ದಾರೆ.

ಇಂದು ರಾಜ್ಯಸಭೆ ಚುನಾವಣೆ ಟಿಕೆಟ್ ವಿಚಾರದಲ್ಲಿನ ಗೊಂದಲದ ಹಿನ್ನೆಲೆಯಲ್ಲಿ ಮಂಗಳವಾರ ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೂರನೇ ಬಾರಿ ರಾಜ್ಯಸಭೆಗೆ ಬಿಜೆಪಿಯಿಂದ ಟಿಕೆಟ್​ ಪಡೆದಿರುವ ಅವರು ಅಪ್ಪಟ ಕನ್ನಡಿಗರು ಎಂದು ಘಂಟಾಘೋಷವಾಗಿ ಹೇಳುತ್ತೇನೆ.

ನಾನು 56 ವರ್ಷಗಳಿಂದ ಆರ್​ಎಸ್​ಎಸ್​ನಲ್ಲಿದ್ದೇನೆ. 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಬಿಜೆಪಿ ಕಟ್ಟುವಲ್ಲಿ ನನ್ನ ಅಳಿಲು ಸೇವೆ ಇದೆ. ಚುನಾವಣೆಗಳಲ್ಲಿ ಕೆಲಸ ಮಾಡಿದ್ದೇನೆ. ಪಕ್ಷದವರು ಏನೇ ಹೇಳಿದರೂ ಅದನ್ನು ಮಾಡುತ್ತೇನೆ. ನಾನು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕತ ಅಂತ ಹೇಳಿದ್ದಾರೆ. ರಾಜ್ಯ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಕ್ಕೆ ತೆರೆ ಎಳೆದಿದ್ದಾರೆ.