ಬೆಂಗಳೂರು: 2020 ನೇ ಸಾಲಿನ ಸರ್ಕಾರಿ ರಜಾ ದಿನಗಳನ್ನು ಘೋಷಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

2ನೇ ಮತ್ತು 4ನೇ ಶನಿವಾರ ಹಾಗೂ ರವಿವಾರಗಳನ್ನು ಹೊರತುಪಡಿಸಿ 18 ಸಾರ್ವತ್ರಿಕ ರಜಾ ದಿನಗಳು ಮತ್ತು 21 ಪರಿಮಿತ ರಜಾ ದಿನಗಳನ್ನು ಘೋಷಿಸಲಾಗಿದೆ.

ಮಾ. 29ರಂದು ನಡೆಯುವ ದೇವರ ದಾಸಿಮಯ್ಯ ಜಯಂತಿ ರವಿವಾರ ಬಂದಿದ್ದು, ಸೆ. 17 ರಂದು ನಡೆಯುವ ವಿಶ್ವಕರ್ಮ ಜಯಂತಿಯು ಮಹಾಲಯ ಅಮಾವಾಸ್ಯೆಯ ದಿನವೇ ಬಂದಿರುವುದರಿಂದ ಪ್ರತ್ಯೇಕ ರಜೆ ನೀಡಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.