ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಒಟ್ಟು 21 ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 10,2020 ರಿಂದ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ ಅಥವಾ ಆರ್ಕಿಟೆಕ್ಚರ್ ನಲ್ಲಿ ಪದವಿ ಪೂರ್ಣಗೊಳಿಸರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಮತ್ತು ಗರಿಷ್ಟ 35 ವರ್ಷದೊಳಗಿನವರಾಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ. ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650 ರಿಂದ 97,100 ರೂ. ವೇತನವನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಅರ್ಜಿದಾರರನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 600 ರೂ. ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಅಥವಾ ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಆಗಸ್ಟ್ 11,2020ರೊಳಗೆ ಪಾವತಿಸಬೇಕಿರುತ್ತದೆ.