ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು-1978ರ ಅಡಿ ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟರಿಯಲ್ ಸೇವಾ ನೇಮಕಾತಿ-2020ಕ್ಕೆ ತಿದ್ದುಪಡಿ ತರಲಾಗಿದ್ದು, ರಾಜ್ಯಪತ್ರದಲ್ಲಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.

ಅದರಂತೆ ಭವಿಷ್ಯದಲ್ಲಿ ರಾಜ್ಯದಲ್ಲಿ ಖಾಲಿ ಇರುವ 36,261 ನಾಗರಿಕ ಪೊಲೀಸ್ ಪೇದೆ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕರಡು ಅಧಿಸೂಚನೆ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗೆ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳಿಗೆ ಪತ್ರ ಬರೆಯಲು ಸೂಚಿಸಲಾಗಿದೆ.!