ಜಿಲ್ಲೆಯಲ್ಲಿ 48 ಜನರಿಗೆ ಕೋವಿಡ್ ಸೋಂಕು ದೃಢ .!
ಚಿತ್ರದುರ್ಗ ;    ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 48 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 625 ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 13, ಹೊಳಲ್ಕೆರೆ-05, ಹಿರಿಯೂರು-09, ಚಳ್ಳಕೆರೆ-08, ಹೊಸದುರ್ಗ-08 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 05 ಸೇರಿದಂತೆ ಒಟ್ಟು 48 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುರುವಾರ ಒಟ್ಟು 474 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 48 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 625 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 12 ಜನ ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 198 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 415 ಸಕ್ರಿಯ ಪ್ರಕರಣಗಳು ಇವೆ.

415 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 73, ಭರಮಸಾಗರ-11, ಹಿರಿಯೂರು ತಾಲ್ಲೂಕು ಧರ್ಮಪುರ-46, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 15, ಹೊಸದುರ್ಗ ತಾಲ್ಲೂಕು ಬೆಲಗೂರು- 27, ಕೆ.ಕೆ. ಪುರ 21, ಮೊಳಕಾಲ್ಮೂರು ತಾಲ್ಲೂಕು ರಾಂಪುರ 14, ಹಿರಿಯೂರು ತಾಲ್ಲೂಕು ಮರಡಿಹಳ್ಳಿ 16,  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 13, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ-24, ಹೊಳಲ್ಕೆರೆ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‍ನಲ್ಲಿ 03, ಚಿತ್ರದುರ್ಗ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ 10. ಮೊಳಕಾಲ್ಮೂರಿನ ಆದರ್ಶ ಶಾಲೆಯಲ್ಲಿ 01, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 17. ಹೋಂ ಕ್ವಾರಂಟೈನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 111. ಉಳಿದ 13 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 180 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4397 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರೈನ ಒಟ್ಟು 4458 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 1201 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 16396 ಜನರ ಮಾದರಿ ಸಂಗ್ರಹಿಸಲಾಗಿದ್ದು, 15215 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 249 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.