ನವದೆಹಲಿ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) 4000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅಕೌಂಟೆಂಟ್, ಸಹಾಯಕ ಎಚ್ಆರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಕಾನಿಕ್ ಸೇರಿದಂತೆ ಹಲವು ಹುದ್ದೆಗಳು ಖಾಲಿಯಿದ್ದು, ಆಸಕ್ತರು ಮಾ.28ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿವಿಧ ನಗರಗಳನ್ನು ಕೇಂದ್ರೀಕರಿಸಿ, ಆಯಾ ರಾಜ್ಯದ ಅರ್ಜಿದಾರರನ್ನು ಅರ್ಹತೆಗೆ ಅನುಗುಣವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.ongcapprentices.co.inಗೆ ಭೇಟಿ ನೀಡಿ. ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.