ಬೆಂಗಳೂರು: ಕರಾವಳಿ, ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ 18ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಕೊಡಗು, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಹಾವೇರಿ, ಕಲಬುರ್ಗಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.