ಬೆಂಗಳೂರು : ಮಕ್ಕಳ ಶೈಕ್ಷಣಿಕ ಪ್ರಗತಿ ಕಾರಣದಿಂದ 7 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ. ಯಾರನ್ನೂ ಅನುತ್ತೀರ್ಣ ಮಾಡಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

7 ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮೂಲಕ ಮಕ್ಕಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. 7 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಮಕ್ಕಳನ್ನು ಫೇಲ್ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ 7 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ, ಕಾರಣಾಂತರದಿಂದ ಅದನ್ನು ತೆಗೆದು ಹಾಕಲಾಗಿದೆ. 1 ರಿಂದ 10 ನೇ ತರಗತಿಯವರೆಗೆ ಪಾಸ್ ಮಾಡುವುದರಿಂದ ಮಕ್ಕಳ ಕಲಿಕೆಯಲ್ಲಿ ಉತ್ತಮ ಫಲಿತಾಂಶ ಕಂಡುಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.!