ನವದೆಹಲಿ : ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೇ, ಅದನ್ನು ಸಾಧಿಸಿಯೇ ತೀರುತ್ತದೆ. ಹಾಗೇ ಭಾರತ ಕೊರೋನಾ ವಿರುದ್ಧ ಸಾಮೂಹಿಕ ಶಕ್ತಿ ತೋರಿದೆ. ಪ್ರತಿಯೊಬ್ಬ ಭಾರತೀಯರು ಕೊರೋನಾ ಸಂದರ್ಭದಲ್ಲಿ ಆತ್ಮ ನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ.  ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಆತ್ಮ ನಿರ್ಭರ ಭಾರತದ ಮಂತ್ರವನ್ನು ಜಪಿಸಿದರು.

ಕೆಂಪುಕೋಟೆಯಲ್ಲಿ ಇಂದು ಕೊರೋನಾ ಸಂಕಷ್ಟದ ನಡುವೆಯೂ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಮೊದಲಿಗೆ ದೇಶದ ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯವನ್ನು ಕೋರಿದರು.

ನಾವಿಂದು ಸ್ವಾತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಇದರ ಹಿಂದೆ ಲಕ್ಷಾಂತರ ಯೋಧರ ತ್ಯಾಗವಿದೆ. ನಮ್ಮ ಸೇನೆ ಭಾರತ ಮಾತೆಯನ್ನು ರಕ್ಷಿಸುತ್ತಿದೆ. ವೀರರ ತ್ಯಾಗ ಬಲಿದಾನದಿಂದಾಗಿ ನಾವಿಂದು ಸಂಭ್ರಮ ಪಡುತ್ತಿದ್ದೇವೆ ಎಂದರು.

ದೇಶಾದ್ಯಂತ ಕೊರೋನಾ ಸಂಕಷ್ಟ ತಂದಿದೆ. ಇಂತಹ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್ ಸೇವೆ ಬಹುಮುಖ್ಯವಾಗಿದೆ ಎಂಬುದಾಗಿ ಕೊರೋನಾ ವಾರಿಯರ್ಸ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಕರೊನಾ ವಿರುದ್ಧವೂ ಭಾರತ ತನ್ನ ಸಾಮೂಹಿಕ ಶಕ್ತಿಯನ್ನು ತೋರಿದೆ. ಭಾರತದ ಪ್ರತಿಯೊಬ್ಬರಿಗೂ ಆತ್ಮನಿರ್ಭರ ಮಂತ್ರವಾಗಿದೆ. ಕರೊನಾ ಸಂದರ್ಭದಲ್ಲೂ ಆತ್ಮನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ. ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೆ, ಸಾಧಿಸಿಯೇ ತೀರುತ್ತದೆ. ಈ ದಿಶೆಯಲ್ಲಿ ನಮ್ಮನ್ನು ನಾವು ತಯಾರಿ ಮಾಡಿಕೊಳ್ಳುವುದು ಅಗತ್ಯವಾಗಿದೆ. ಯುವಶಕ್ತಿಯನ್ನು ಹೊಂದಿರುವ ಭಾರತದ ಮೊದಲ ಮಂತ್ರ ಆತ್ಮನಿರ್ಭರ ಆಗಿದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಆತ್ಮ ನಿರ್ಭರ ಭಾರತದ ಮಂತ್ರವನ್ನು ಜಪಿಸಿದರು