ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮನು ಬಳಿಗಾರ್  ಹೇಳಿದ್ದಾರೆ.

ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಳಿಗಾರ್, ಕಾರ್ಯಕಾರಿ ಸಮಿತಿ ಸಭೆಯಯಲ್ಲಿ ಸಮ್ಮೇಳನಾಧ್ಯಕ್ಷರ ಸ್ಥಾನಕ್ಕೆ ಹಲವು ಹೆಸರುಗಳು ಚರ್ಚೆಗೆ ಬಂದವು. ಆದರೆ, ಸರ್ವಾನುಮತದಿಂದ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರನ್ನು ಮುಂದಿನ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.

ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ 2020ರ ಫೆಬ್ರವರಿ 5,6 ಮತ್ತು 7ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಮನು ಬಳಿಗಾರು ಹೇಳಿದರು.